Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗಮನ

by admin June 13, 2024
written by admin June 13, 2024 0 comments 2 minutes read
0FacebookTwitterPinterestEmail
235

ಜೆಡಿಎಸ್ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ

ಬೆಂಗಳೂರು: ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದು, ಆ ಸಂಭ್ರಮದಲ್ಲಿ ನಾನು ಕೂಡ ಭಾಗಿಯಾಗುತ್ತೇನೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷದ ರಾಜ್ಯದ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಶುಕ್ರವಾರ 11.50 ಗಂಟೆಗೆ ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅವರ ಸ್ವಾಗತಕ್ಕೆ ಎಲ್ಲಾ ಸಿದ್ಧತೆಗಳನ್ನು ಕಾರ್ಯಕರ್ತರು ಮಾಡಿಕೊಳ್ಳುತ್ತಿರುವುದು ನನಗೆ ಸಂತಸ ಉಂಟು ಮಾಡಿದೆ ಎಂದರು.

ವಿಮಾನ ನಿಲ್ದಾಣದಿಂದ ಪಕ್ಷದ ರಾಜ್ಯ ಕಚೇರಿ ಜೆಪಿ ಭವನಕ್ಕೆ ಬರಲಿರುವ ಅವರು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಸೌಹಾರ್ದ ಭೇಟಿ ಮಾಡಲಿದ್ದಾರೆ. ಬಳಿಕ ಮಾಜಿ ಪ್ರಧಾನಿಗಳಾದ ದೇವೇಗೌಡರ ಮನೆಗೆ ತೆರಳಿ ತಂದೆ ತಾಯಿಯ ಆಶೀರ್ವಾದ ಪಡೆಯಲಿದ್ದಾರೆ. ನಂತರ ತಿರುಪತಿಗೆ ತೆರಳಲಿದ್ದಾರೆ ಎಂದು ನಿಖಿಲ್ ಅವರು ಮಾಹಿತಿ ನೀಡಿದರು.

ಭಾನುವಾರ ತಮಗೆ ರಾಜಕೀಯ ಜನ್ಮ  ನೀಡಿದ ರಾಮನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬಳಿಕ ತಮಗೆ ರಾಜಕೀಯ ಶಕ್ತಿ ತುಂಬಿದ ಮಂಡ್ಯದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಎರಡೂ ಕಡೆ ನಮ್ಮ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಭೆಗಳನ್ನು ಹಮ್ಮಿಕೊಂಡಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿದ್ದಾರೆ. ಎರಡು ಸಲ ರಾಜ್ಯದ ಮುಖ್ಯಮಂತ್ರಿಯಾಗಿ ಬಡವರ ಪರ, ರೈತರ ಪರ ಕೆಲಸ ಮಾಡಿರುವ ಕುಮಾರಸ್ವಾಮಿ ಅವರಿಗೆ ಈ ಅವಕಾಶ ದೊರಕಿರುವುದು ಅತ್ಯಂತ ಸಂತೋಷದ ಸಂಗತಿ.

ಅತ್ಯಂತ ಪ್ರಮುಖ ಸ್ಥಾನವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ನಿರೀಕ್ಷೆ ಇದೆ, ವಿಶ್ವಾಸ ಇದೆ. ಕುಮಾರಸ್ವಾಮಿ ಅವರು ಈಗಾಗಲೇ ಕೆಲಸ ಆರಂಭ ಮಾಡಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಎದ್ದು ಕೆಲಸ ಮಾಡುತ್ತಿದ್ದಾರೆ. ಉಕ್ಕು ಸಚಿವಾಲಯದಲ್ಲಿ ನಮ್ಮ ರಾಜ್ಯಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕುವ ಮೂಲಕ ಕೆಲಸ ಆರಂಭ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಗೆ ಅಸ್ತು

ಮಂಡ್ಯ ಜಿಲ್ಲೆಯ ಎಲ್ಲ ಜನತೆ, ನಾಯಕರಿಗೆ ಧನ್ಯವಾದಗಳನ್ನು ಹೇಳುತ್ತೇನೆ. 2018ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸಂಖ್ಯೆಯ ಶಾಸಕರನ್ನು ಆಯ್ಕೆ ಮಾಡಿದ್ದರು. ಅದೇ ರೀತಿ ಈ ಸಲ ಕುಮಾರಸ್ವಾಮಿ ಅವರನ್ನು ಹೆಚ್ಚಿನ ಅಂತರದಲ್ಲಿ ಆಯ್ಕೆ ಮಾಡಿದ್ದಾರೆ. ರಾಮನಗರದಲ್ಲಿ ರಾಜಕೀಯ ಬದುಕನ್ನು ಕಟ್ಟಿಕೊಟ್ಟ ಜನತೆಗೂ ಧನ್ಯವಾದಗಳನ್ನು ಹೇಳುತ್ತೇನೆ ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಪರವಾಗಿ ದೇಶದ ಮತ್ತು ರಾಜ್ಯದ ಜನತೆ ಐತಿಹಾಸಿಕ ತೀರ್ಪು ನೀಡಿದ್ದಾರೆ. ಕಳೆದ ಎರಡು ಅವಧಿಗಳಲ್ಲಿ ಮೋದಿ ಅವರು ಅನೇಕ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ.

 ಮತ್ತೆ ಮೋದಿಯವರು ಪ್ರಧಾನಿ ಆಗಲು ಜನ ತೀರ್ಪು ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ದೇವೇಗೌಡರು ಮೋದಿ ಅವರ ನಾಯಕತ್ವ ಮೆಚ್ಚಿ ಮೈತ್ರಿ ಭಾಗವಾಗಲು ತೀರ್ಮಾನ ಮಾಡಿದರು. ಚಾಮರಾಜನಗರ, ಹಾಸನ ಹೊರತುಪಡಿಸಿ ಹಳೇ ಮೈಸೂರು ಭಾಗದಲ್ಲಿ ಎಲ್ಲಾ ಕಡೆ ಮೈತ್ರಿ ಯಶಸ್ವಿಯಾಗಿದೆ. ಜನತೆಯ ವಿಶ್ವಾಸ  ಉಳಿಸಿಕೊಳ್ಳುತ್ತೇವೆ ಎಂದು ನಿಖಿಲ್ ಅವರು ತಿಳಿಸಿದರು.

ಸಚಿವರು, ಅಧಿಕಾರಿಗಳಿಗೆ ಮುಖ್ಯಮಂತ್ರಿ ತರಾಟೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
arrivingbengalurufirst timegrand welcomehd kumaraswamyHeavy IndustriesJDS workersnikhil kumaraswamystatesteelunion minister
0 FacebookTwitterPinterestEmail
admin

previous post
ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಗೆ ಅಸ್ತು
next post
ಬಿಎಸ್‌ವೈ ಬಂಧನ ಹಿಂದೆ ರಾಹುಲ್ ಗಾಂಧಿ ಷಡ್ಯಂತ್ರ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ