Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ತೈಲ ದರ ಏರಿಕೆ ವಿರೋಧಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ

by admin June 16, 2024
written by admin June 16, 2024 0 comments 2 minutes read
0FacebookTwitterPinterestEmail
163
ಲೋಕಸಭೆ ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರದಿಂದ ತೈಲ ದರ ಏರಿಕೆ : ಆರ್.ಅಶೋಕ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ತೈಲ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಹಾಕಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಒಂದು ರೂಪಾಯಿ ಬೆಲೆ ಏರಿಕೆಯಾದಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಕೂಟರ್ ಶವ ಯಾತ್ರೆ ಮಾಡಿದ್ದರು.15 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಯೋಗ್ಯತೆ ಇಲ್ಲ. ಜನರ ಮೇಲೆ ಸೇಡು ತೀರಿಸಿಕೊಳ್ಳಲು ದರ ಏರಿಸಿದ್ದಾರೆ ಎಂದರು.

ಗ್ಯಾರಂಟಿಗಾಗಿ 55,000 ಕೋಟಿ ರೂ. ಮೀಸಲಿಟ್ಟಿರುವುದರಿಂದ ಹಣ ಕೊರತೆಯಾಗಿ ಸಂಬಳ ಕೊಡಲು ದುಡ್ಡಿಲ್ಲ. ಆದ್ದರಿಂದ ಜನರ ಮೇಲೆ 3-4 ಸಾವಿರ ಕೋಟಿ ರೂ‌. ಹೊರೆ ಹಾಕಿ ತೈಲ ದರ ಏರಿಸಲಾಗಿದೆ. ಇದರಿಂದ ಸಹಜವಾಗಿ ತರಕಾರಿ, ಹಾಲು, ಹಣ್ಣು, ಕೊನೆಗೆ ಟೀ ಕಾಫಿಗೂ ದರ ಏರಲಿದೆ. ನಾಳೆಯಿಂದಲೇ ಆಟೊರಿಕ್ಷಾದವರು, ಗೂಡ್ಸ್ ಗಾಡಿಗಳು ದರ ಏರಿಕೆ ಮಾಡುತ್ತಾರೆ ಎಂದರು.

ಕಳ್ಳ ದಾರಿ ಮೂಲಕ ಸೇಡು

ನ್ಯಾಯವಾಗಿ ಮಾಡುವುದಿದ್ದರೆ ಬಜೆಟ್ಟಲ್ಲಿ ಸರ್ಕಾರ ತೈಲ ದರ ಏರಿಸಬೇಕಿತ್ತು. ಆದರೆ ಚುನಾವಣೆಯಲ್ಲಿ ಸೋತಿದ್ದರಿಂದ ನಂತರ ಕಳ್ಳ ದಾರಿಯಿಂದ ದರ ಏರಿಸಿ ಜನರ ಮೇಲೆ ಸೇಡು ತೀರಿಸಿಕೊಂಡಿದ್ದಾರೆ. ಸಂಸತ್ತಿನಲ್ಲಿ 100 ಸೀಟು ಪಡೆಯಲಾಗದ ಕಾಂಗ್ರೆಸ್ ಪೆಟ್ರೋಲ್ ದರವನ್ನು 100 ರೂಪಾಯಿಗೂ ಹೆಚ್ಚು ಮಾಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದಂತೆ ಟಕಾಟಕ್ ಎಂದು ತೈಲ ದರ ಏರಿಸಿದ್ದಾರೆ ಎಂದು ದೂರಿದರು.

ಜನರು ಮತ ನೀಡಿಲ್ಲ ಎಂಬ ಕಾರಣಕ್ಕೆ ಸರ್ಕಾರ ದರ ಏರಿಸಿದೆ. ಹಿಂದೆ ಬಿಜೆಪಿ ಸರ್ಕಾರ 7 ರೂ. ಕಡಿಮೆ ಮಾಡಿತ್ತು. ಕಾಂಗ್ರೆಸ್ ಗೆ ಮಾನವಿದ್ದರೆ ದರ ಏರಿಕೆ ವಾಪಾಸ್ ಪಡೆಯಲಿ ಎಂದು ಆಗ್ರಹಿಸಿದರು.

ಬಿಡಿಎ ಆಸ್ತಿ ಮಾರಾಟ

ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರ ಬಿಡಿಎ ಆಸ್ತಿಗಳ ಮಾರಾಟಕ್ಕೆ ಮುಂದಾಗಿದೆ. ಬಿಬಿಎಂಪಿ ಹಾಗೂ ಜಲಮಂಡಳಿಯ ಆಸ್ತಿಗಳನ್ನು ಕೂಡ ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಶಿಸ್ತನ್ನು ಸರ್ವನಾಶ ಮಾಡಿದ್ದಾರೆ. ಇನ್ನೂ ಒಂದು ವರ್ಷದಲ್ಲಿ ವಿಧಾನಸೌಧವನ್ನೂ ಅಡಮಾನ ಇಡುತ್ತಾರೆ ಎಂದರು.

ಸರ್ಕಾರಿ ನೌಕರರು ಮತ ನೀಡಿಲ್ಲವೆಂಬ ಕಾರಣಕ್ಕೆ ವೇತನ ಹೆಚ್ಚಿಸಿಲ್ಲ. 7 ನೇ ವೇತನ ಆಯೋಗದ ವರದಿ ಜಾರಿ ‘ನಾಳೆ ಬಾ’ ಎಂಬ ಸ್ಥಿತಿಗೆ ಬಂದಿದೆ. 143 ಶಾಸಕರ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಮತ ಬಂದಿದೆ. ಅದಕ್ಕಾಗಿ ತೈಲ ದರ ಏರಿಸಿದ್ದಾರೆ. ಇದರಿಂದ ಕಾಂಗ್ರೆಸ್ ಶಾಸಕರು ಕೂಡ ಬೇಸರಗೊಂಡಿದ್ದಾರೆ‌. ಜಿಲ್ಲಾ ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

    ಜೂನ್ 17 ರಂದು ಪ್ರತಿಭಟನೆ

      ಏರಿಕೆ ಮಾಡಿರುವ ತೈಲ ದರ ಇಳಿಕೆಗೆ ಒತ್ತಾಯಿಸಿ ಜೂನ್ 17 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ. ಜೊತೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ಇನ್ನು ಮುಂದೆಯೂ ಪ್ರತಿಭಟನೆ ನಡೆಸಲಾಗುವುದು ಎಂದು ಆರ್.ಅಶೋಕ ತಿಳಿಸಿದರು.
      ಇದೇ ರೀತಿ ತೈಲದರ ಏರಿಕೆ ವಿರೋಧಿಸಿರುವ ಜೆಡಿಎಸ್ ಕೂಡ ಪತ್ರಿಭಟನೆ ಮಾಡಲಿದ್ದು, ಪ್ರೀಡಂ ಪಾರ್ಕ್ ನಿಂದ ವಿಧಾನಸೌಧದವರೆಗೆ ಪ್ರತಿಭಟನೆ ನಡೆಸಲಿದೆ

      Share this:

      • Share on WhatsApp (Opens in new window) WhatsApp
      • Post
      • Tweet
      • Print (Opens in new window) Print
      • Email a link to a friend (Opens in new window) Email
      against oil pricebjp-jdsCongress governmentdefeatelectionLok Sabhaprice hikeprotestR. Ashokarevenge
      0 FacebookTwitterPinterestEmail
      admin

      previous post
      ಲೋಕಸಭಾ ಚುನಾಣೆಯಲ್ಲಿ ಹಿನ್ನಡೆ : 5 ರಿಂದ 6 ಸಚಿವರ ತಲೆದಂಡ!
      next post
      ತೈಲ ಬೆಲೆ ಏರಿಕೆ ಜನರಿಗೆ ಹೊರೆಯಾಗಲ್ಲ: ಸಿದ್ದು ಸಮರ್ಥನೆ

      You may also like

      1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

      March 6, 2026

      ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

      March 4, 2026

      ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

      March 2, 2026

      ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

      February 28, 2026

      ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

      February 27, 2026

      ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

      February 27, 2026

      ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

      February 26, 2026

      ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

      February 25, 2026

      ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

      February 24, 2026

      ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

      February 23, 2026

      Social Networks

      Facebook Twitter Instagram Linkedin Youtube Email Rss

      KMS Analysis

      • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

        March 2, 2026
      • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

        October 25, 2025
      • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

        October 6, 2025
      • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

        June 17, 2025
      • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

        June 12, 2025

      Categories

      • Special Story (404)
      • ಅಂಕಣ (108)
      • ಉದ್ಯೋಗ (315)
      • ದಿನ ಭವಿಷ್ಯ (110)
      • ರಾಜಕೀಯ (1,902)
      • ರಾಜ್ಯ (2,213)
      • ರಾಷ್ಟ್ರ (2,183)
      • ವಿಶ್ಲೇಷಣೆ (189)
      • ಶಿಕ್ಷಣ (381)
      • ಸಂದರ್ಶನ (11)

      About Us

      ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

      Facebook Twitter Linkedin Youtube Email Vimeo Rss

      Politics

      • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

        March 6, 2026
      • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

        March 4, 2026
      • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

        March 2, 2026

      KMS Special

      • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

        March 6, 2026
      • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

        March 4, 2026
      • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

        March 2, 2026
      • Facebook
      • Twitter
      • Linkedin
      • Youtube
      • Email
      • Telegram

      @2020 - All Right Reserved. Designed and Developed by Karnatakabest.com

      KMS
      • Home
      • Special Story
      • ರಾಜ್ಯ
      • ರಾಷ್ಟ್ರ
      • ರಾಜಕೀಯ
      • ವಿಶ್ಲೇಷಣೆ
      • ಅಂಕಣ
      • ಶಿಕ್ಷಣ
      • ಉದ್ಯೋಗ
      • ಸಂದರ್ಶನ

      Read alsox

      1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

      March 6, 2026
      Sign In

      Keep me signed in until I sign out

      Forgot your password?

      Password Recovery

      A new password will be emailed to you.

      Have received a new password? Login here

      ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ