Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪೆಟ್ರೋಲ್, ಡೀಸೆಲ್ ದರ ಇಳಿಕೆ ಇಲ್ಲ

by admin June 17, 2024
written by admin June 17, 2024 0 comments 2 minutes read
0FacebookTwitterPinterestEmail
182

ಬೆಂಗಳೂರು:ಪೆಟ್ರೋಲ್, ಡೀಸೆಲ್ ದರ ಏರಿಕೆಯಲ್ಲಿ ಇಳಿಕೆ ಇಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರಿಂದ ಬರುವ ಸಂಪನ್ಮೂಲವನ್ನು ರಾಜ್ಯದ ಅಭಿವೃದ್ಧಿಗೆ ಬಳಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬಿಜೆಪಿ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಅಂಕಿ-ಅಂಶಗಳ ಮೂಲಕ ಅವರು ಸಮರ್ಥನೆ ಮಾಡಿಕೊಂಡರು.

ತೆರಿಗೆ ಹೆಚ್ಚಳ ಸಂಗ್ರಹ ರಾಜ್ಯ ಖಜಾನೆಗೆ

ದರ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡ ಬೆನ್ನಲ್ಲೇ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಅವರು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಮೂರು ಸಾವಿರ ಕೋಟಿ ರೂ.ಗಳು ರಾಜ್ಯದ ಖಜಾನೆಗೆ ಸಂದಾಯವಾಗುತ್ತದೆಯೇ ಹೊರತು ನನ್ನ ಜೇಬಿಗಲ್ಲ, ಈ ಹಣವನ್ನು ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗುವುದೆಂದು ತಿಳಿಸಿದರು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ 40% ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು, ಈ ರೀತಿ ಅಂದಾಜು ಒಂದೂವರೆ ಲಕ್ಷ ಕೋಟಿ ರೂ.ಗಳಷ್ಟು ರಾಜ್ಯದ ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರು ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ ಎಂದರು.

ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ ಎಂದು ಪ್ರಶ್ನಿಸಿದರು.

ಗ್ಯಾರಂಟಿಗಳಿಗೆ 60 ಸಾವಿರ ಕೋಟಿ ರೂ.

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂ.ಗಳನ್ನು ವ್ಯಯ ಮಾಡುತ್ತಿದೆ, ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ.

ಸದ್ಯದ ಅಲ್ಪ ಪ್ರಮಾಣದ ಡೀಸೆಲ್, ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ, ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂ., ಆದ್ದರಿಂದ ಬಿಜೆಪಿ ನಾಯಕರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ ಎಂದರು.

ಕಾಂಗ್ರೆಸ್‌ನಿಂದ ಬಡ-ಮಧ್ಯಮ ವರ್ಗದವರ ಸುಲಿಗೆ
ರಾಜ್ಯ ಸಂಪನ್ಮೂಲ ಕ್ರೋಡೀಕರಣ ಅವಕಾಶ ಸೀಮಿತ

ಕೇಂದ್ರ ಸರ್ಕಾರ ಜಿಎಸ್‌ಟಿ ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಡೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ, ಕೇಂದ್ರ ಸರ್ಕಾರ ಜಿಎಸ್‌ಟಿ, ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ.

ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತುಪಡಿಸಿ ಯಾವುದೇ ಮೂಲಗಳಿಲ್ಲ.

ಇತರ ರಾಜ್ಯಗಳ ಪೆಟ್ರೋಲ್, ಡೀಸೆಲ್ ಬೆಲೆಗೆ ಹೋಲಿಸಿದರೆ ರಾಜ್ಯದ ದರಗಳು ಕಡಿಮೆ ಇವೆ, ರಾಜ್ಯ ಸರ್ಕಾರ ಅಲ್ಪ ಪ್ರಮಾಣದ ತೆರಿಗೆ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿ ಸ್ಪಷ್ಟ ಪಡಿಸಿದರು.

ಬಿಜೆಪಿ ಅವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ ಎಂದು ಪ್ರಶ್ನಿಸಿದ ಅವರು, ಡಾ.ಮನಮೋಹನ್ ಸಿಂಗ್ ಅವಧಿಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 113 ಡಾಲರ್ ಇತ್ತು, 2015ರಲ್ಲಿ ಈ ಬೆಲೆ ಅರ್ಧಕ್ಕರ್ಧ ಕಡಿಮೆಯಾದರೂ, ಬೆಲೆ ಇಳಿಸಿ, ಜನರ ಹೊರೆ ಕಡಿಮೆ ಮಾಡುವ ಕಾಳಜಿಯನ್ನು ನರೇಂದ್ರ ಮೋದಿ ಅವರು ತೋರಲಿಲ್ಲ, ಬಿಜೆಪಿಯವರು ಯಾರ ವಿರುದ್ಧ ಹೋರಾಡಬೇಕು ಎಂದು ಪ್ರಶ್ನಿಸಿದರು.

ನಟ ಚಿಕ್ಕಣ್ಣ ಹೆಗಲಿಗೂ ಏರಿದ ಕೊಲೆ ಪ್ರಕರಣ !
ಬಿಜೆಪಿ ದನಿ ಎತ್ತಿಲ್ಲ

ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತಾ ಬಂದರೂ, ಬಿಜೆಪಿಯವರು ದನಿ ಎತ್ತಿಲ್ಲ, ತೆರಿಗೆ ಅನ್ಯಾಯವಾದಾಗ ಸಂಸದರು ಈ ವಿಷಯದ ಕುರಿತು ಮಾತನಾಡಿಲ್ಲ.

ರಾಜ್ಯಕ್ಕೆ 15ನೇ ಹಣಕಾಸು ಆಯೋಗವು ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿದ್ದರೂ, ಕೇಂದ್ರ ಸರ್ಕಾರ ನೀಡಿಲ್ಲ, ಭದ್ರಾ ಮೇಲ್ದಂಡೆ ಯೋಜನೆಗೆ ಆಯವ್ಯಯದಲ್ಲಿ ನಿರ್ಮಲಾ ಸೀತಾರಾಮನ್ ಅವರು 5,000 ಕೋಟಿ ರೂ. ಒದಗಿಸುವುದಾಗಿ ಘೋಷಿಸಿದರೂ, ಬಿಡಿಗಾಸೂ ನೀಡಿಲ್ಲ, ಈ ವಿಷಯಗಳ ಕುರಿತು ಬಿಜೆಪಿಯವರು ದನಿ ಎತ್ತಿದ್ದಾರೆಯೇ, ಬಿಜೆಪಿ ಬಡವರು, ದಲಿತ ವಿರೋಧಿ ಧೋರಣೆ ಹೊಂದಿದೆ ಎಂದು ಅವರು ನುಡಿದರು.

ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ ಎಂದು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahincome of 3 thousand rs.no reduce in petrol - diesel price hikespend to development work
0 FacebookTwitterPinterestEmail
admin

previous post
ನಟ ಚಿಕ್ಕಣ್ಣ ಹೆಗಲಿಗೂ ಏರಿದ ಕೊಲೆ ಪ್ರಕರಣ !
next post
ಪರಿಶಿಷ್ಟರ ಹಾಸ್ಟೆಲ್‌ಗಳ ನಿರ್ಲಕ್ಷ್ಯಕ್ಕೆ ಅಧಿಕಾರಿಗಳಿಗೆ ತರಾಟೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ