Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ನೈಸರ್ಗಿಕ ವಿಕೋಪ ನಿರ್ವಹಣೆ ಕ್ಷೇತ್ರದಲ್ಲಿ ವಿಶ್ವಬ್ಯಾಂಕ್ ನಿಂದ 3,500 ಕೋಟಿ ರೂ.‌ಹೂಡಿಕೆ

by KM Shivaraju June 20, 2024
written by KM Shivaraju June 20, 2024 0 comments 2 minutes read
0FacebookTwitterPinterestEmail
256

ರಾಜ್ಯ ಸರ್ಕಾರದಿಂದಲೂ ರೂ.1500 ಕೋಟಿ ಹೂಡಿಕೆ : ಕೃಷ್ಣ ಬೈರೇಗೌಡ

ಬೆಂಗಳೂರು : ಕರ್ನಾಟಕ ವಿಕೋಪ ನಿರ್ವಹಣೆ ಹಾಗೂ ಉನ್ನತೀಕರಣಕ್ಕಾಗಿ ವಿಶ್ವಬ್ಯಾಂಕ್ 2000 ಕೋಟಿ ರೂ. ಹೂಡಿಕೆ ಮಾಡಲಿದ್ದು, ರಾಜ್ಯ ಬೆಸರ್ಕಾರವೂ ರೂ.1,500 ಕೋಟಿ ಹೂಡಲಿದೆ.

ವಿಪತ್ತು ನಿರ್ವಹಣೆಗೆ ವಿಶ್ವಬ್ಯಾಂಕ್ ಹೊಸ ತಂತ್ರಜ್ಞಾನಗಳನ್ನೊಳಗೊಂಡ ಹೊಸ ಯೋಜನೆಯೊಂದನ್ನು ರೂಪಿಸಿದ್ದು, 3500 ಕೋಟಿ ರೂ.ನ ಈ ಯೋಜನೆ 2025 ಮಾರ್ಚ್ ನಿಂದ ವಿಶ್ವಬ್ಯಾಂಕ್ ಹಾಗೂ ರಾಜ್ಯ ಸರ್ಕಾರ ಸಹಯೋಗದೊಂದಿಗೆ ಪೂರ್ಣ ಪ್ರಮಾಣದಲ್ಲಿ ಚಾಲ್ತಿಗೆ ಬರಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ವಿಶ್ವಬ್ಯಾಂಕ್, ಬಿಬಿಎಂಪಿ ಹಾಗೂ ಬಿಡಬ್ಲ್ಯೂಎಸ್ಎಸ್ ಬಿ ಪ್ರತಿನಿಧಿಗಳ ಜೊತೆಗೆ ಗುರುವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ವಿಶ್ವಬ್ಯಾಂಕ್ ಪ್ರತಿನಿಧಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ತಮ್ಮ ಯೋಜನೆಯ ನೀಲನಕ್ಷೆಯನ್ನು ಪ್ರಸ್ತುತಪಡಿಸಿದರು.

ನಂತರ ಸಚಿವ ಕೃಷ್ಣ ಬೈರೇಗೌಡ ಅವರು ಮಾತನಾಡಿ, “ರಾಜ್ಯವು ಪ್ರತಿವರ್ಷ ಬರ ಅಥವಾ ನೆರೆ ಪರಿಸ್ಥಿತಿಯನ್ನು ಎದುರಿಸುವುದು ಸಾಮಾನ್ಯ ಸಂಗತಿಯಾಗಿದೆ. ಇಂತಹ ರಾಷ್ಟ್ರೀಯ ವಿಪತ್ತುಗಳನ್ನು ನವೀನ ತಂತ್ರಜ್ಞಾನಗಳ ಮೂಲಕ ಎದುರಿಸುವುದು ಇಂದಿನ ತುರ್ತು ಅಗತ್ಯ. ಈ ನಿಟ್ಟಿನಲ್ಲಿ ಕಳೆದ ಮೇ ತಿಂಗಳಲ್ಲಿ ವಿಶ್ವಬ್ಯಾಂಕ್ ಭೂ ಸಮ್ಮೇಳದಲ್ಲಿ ಸ್ವತಃ ತಾವು ಪಾಲ್ಗೊಂಡದ್ದು ಇಂದು ಫಲ ನೀಡಿದೆ” ಎಂದು ಅಭಿಪ್ರಾಯಪಟ್ಟರು.

ನಿಗಮ- ಮಂಡಲಿ ನೇಮಕಾತಿ ಪೂರ್ಣ

“ಮಾರ್ಚ್ 2025ರಿಂದ ಮುಂದಿನ ಏಳು ವರ್ಷಗಳ ಅವಧಿಗೆ ವಿಶ್ವಬ್ಯಾಂಕ್ ರಾಜ್ಯದಲ್ಲಿ ವಿಪತ್ತು ನಿರ್ವಹಣೆಗೆ ರೂ. 2,000 ಕೋಟಿ ಹೂಡಲಿದ್ದು, ಕರ್ನಾಟಕ ಸರ್ಕಾರವೂ ರೂ.1,500 ಕೋಟಿ ಹೂಡಿಕೆ ಮಾಡಲಿದೆ. ಆದರೆ, ಬರ-ನೆರೆ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಈಗಾಗಲೇ ಕೆಲಸ ಆರಂಭಿಸಿದ್ದು, ತನ್ನ ಪಾಲಿನ ಹಣವನ್ನು ವಿನಿಯೋಗಿಸಿ ನೀರಿನ ಸಂಸ್ಕರಣೆ ಹಾಗೂ ಕೆರೆಗಳ ಜಾಲ ನಿರ್ಮಾಣ ಕಾರ್ಯವನ್ನು ಆರಂಭಿಸಿದೆ ಎಂದರು.

ವಿಶ್ವಬ್ಯಾಂಕ್ ಪ್ರತಿನಿಧಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಸಚಿವರು. “ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಕಳೆದೊಂದು ವರ್ಷಗಳಿಂದ ಶ್ರಮವಹಿಸಿ ಕೆರೆಗಳ ಜಾಲವನ್ನು (Lake Network) ನಿರ್ಮಿಸಲಾಗಿದೆ.

ನಗರದಾದ್ಯಂತ ಒಳಚರಂಡಿ ವ್ಯವಸ್ಥೆಯನ್ನು ಸುಧಾರಿಸಿದ್ದು, ಇದರ ಮೂಲಕ ಹೆಚ್ಚುವರಿ ನೀರನ್ನು ಕೆರೆಗೆ ಹರಿಸಲಾಗುತ್ತಿದೆ. ಒಂದು ಕೆರೆ ತುಂಬಿದ ಕೂಡಲೇ ಆ ನೀರನ್ನು ಮತ್ತೊಂದು ಕೆರೆಗೆ ಹರಿಸುವ ಆ ಮೂಲಕ ಪ್ರವಾಹ ಸ್ಥಿತಿಯನ್ನು ನಿರ್ವಹಣೆ ಮಾಡುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ” ಎಂದು ಅವರು ವಿವರಿಸಿದರು.

ಇದಲ್ಲದೆ, “ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಪಕ್ಕದ ಜಿಲ್ಲೆಗಳಿಗೆ ಹರಿಸಲಾಗುತ್ತಿದೆ. ಇದರಿಂದ ನೆರೆ ಜಿಲ್ಲೆಗಳ ಅಂತರ್ಜಲ ಮಟ್ಟ ವೃದ್ಧಿಯಾಗಿದೆ. ಕೃಷಿ ವಿಭಾಗದಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ” ಎಂದು ಸಚಿವರು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಳೆ ಆರಂಭವಾಗಿದ್ದು, ಪಾಲಿಕೆ (BBMP) ಮತ್ತು ಜಲಮಂಡಳಿ (BWSSB) ಒಟ್ಟಾಗಿ ಕಾರ್ಯನಿರ್ವಹಿಸಬೇಕಿದೆ. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಪ್ರವಾಹ ಸ್ಥಿತಿಯನ್ನು ಒಟ್ಟಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸಬೇಕು” ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ನೀರಿನ ಲೆಕ್ಕಪರಿಶೋಧನೆಗೆ ಸೂಚನೆ (Water Audit)

ಕರ್ನಾಟಕದಲ್ಲಿ ಅಧ್ಯಯನ ಭಾಗವಾಗಿ ಮೊದಲ ನೀರಿನ ಲೆಕ್ಕಪರಿಶೋಧನೆ ನಡೆಯಬೇಕು ಎಂದು ಅವರು ಸಭೆಯಲ್ಲಿ ವಿಶ್ವಬ್ಯಾಂಕ್ ಪ್ರತಿನಿಧಿಗಳ ಎದುರು ಒತ್ತಾಯಿಸಿದರು.

ಈ ಬಗ್ಗೆ ವಿವರಿಸಿದ ಸಚಿವರು, “ ರಾಜ್ಯದಲ್ಲಿ ಶೇ.20 ರಷ್ಟು ನೀರು ಕುಡಿಯಲು ಬಳಕೆಯಾದರೆ, ಶೇ.80 ರಷ್ಟು ನೀರು ಕೃಷಿ ಕೆಲಸಕ್ಕೆ ಸೀಮಿತವಾಗಿದೆ. ಈ ಪೈಕಿ ಹೆಚ್ಚು ನೀರನ್ನು ಭತ್ತ ಮತ್ತು ಕಬ್ಬು ಬೆಳೆಗೆ ಬಳಸಲಾಗುತ್ತದೆ. ಆದರೆ, ಯಾವ ರೈತ ಎಷ್ಟು ನೀರು ಬಳಸ್ತಾನೆ? ಯಾರಿಗೆ ನೀರಿಲ್ಲ? ಯಾವ ಭಾಗದಲ್ಲಿ ಹೆಚ್ಚು ನೀರಿನ ಸಮಸ್ಯೆ ಇದೆ? ರೈತರು ಬಳಸುವ ನೀರಿನ ಪೈಕಿ ಅಂತರ್ಜಲದ ಪ್ರಮಾಣ ಎಷ್ಟು? ಎಂಬ ಬಗ್ಗೆ ಈವರೆಗೆ ಯಾವುದೇ ಅಧ್ಯಯನ ನಡೆದಿಲ್ಲ” ಎಂದರು.

ಅಲ್ಲದೆ, “ಇಂತಹದ್ದೊಂದು ಅಧ್ಯಯನ-ಸಂಶೋಧನೆ ಸಾಧ್ಯವಾದರೆ ಮುಂದಿನ ದಿನಗಳಲ್ಲಿ ಅಂತಹ ಅಧ್ಯಯನವನ್ನು ಆಧರಿಸಿ ಕಾನೂನು ರಚಿಸಲು ಅಥವಾ ನೀತಿಗಳನ್ನು ರೂಪಿಸಲು ಸಹಾಯವಾಗುತ್ತದೆ. ಈ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ನೇತೃತ್ವದ ಈ ಹೊಸ ಯೋಜನೆಯ ಅಡಿಯಲ್ಲಿ ನೀರಿನ ಲೆಕ್ಕಪರಿಶೋಧನೆ (Water Audit) ನಡೆಯಬೇಕು” ಎಂದು ಒತ್ತಾಯಿಸಿದರು.

ನೆರೆಗಿಂತಲೂ ಬರವೇ ಚಿಂತೆ

ರಾಜ್ಯದಲ್ಲಿ ನೆರೆ ಪರಿಸ್ಥಿತಿಗಿಂತಲೂ ಬರವೇ ದೊಡ್ಡ ಸಮಸ್ಯೆಯಾಗಿದೆ ಎಂದು ಇದೇ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಆತಂಕ ವ್ಯಕ್ತಪಡಿಸಿದರು.

ಈ ಬಗ್ಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಲ್ಲಿ ನೆರೆ ಪರಿಸ್ಥಿತಿಗಿಂತ ಬರವೇ ಹೆಚ್ಚಾಗಿದೆ. ಬರ ಪರಿಸ್ಥಿತಿಯನ್ನು ಎದುರಿಸುವುದು ಯಾವುದೇ ಸರ್ಕಾರಕ್ಕೆ ಸವಾಲಿನ ಕೆಲಸವಾಗಿದೆ. ಹೀಗಾಗಿ ಬರ ಸ್ಥಿತಿಯನ್ನು ಪರಿಣಾಮಕಾರಿ ಎದುರಿಸುವ ಹಾಗೂ ದೀರ್ಘಾಕಾಲದ ಬರ ನಿರ್ವಹಣೆಗೆ ಶಾಶ್ವತ-ಸುಸ್ಥಿರ ಪರಿಹಾರ ಹುಡುಕುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಅಧ್ಯಯನವೂ ನಡೆಯಬೇಕು” ಎಂದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮೀ ಮಹೇಶ್, ವಿಶ್ವಬ್ಯಾಂಕ್ ಯೋಜನೆ ಮುಖ್ಯಸ್ಥ ಕ್ರಿಸ್ಟೋಫರ್ ವೆಲ್ಸಿನ್, ವಿಪತ್ತು ಅಪಾಯದ ಹಣಕಾಸು ತಜ್ಞ ವಿಜಯಶೇಖರ ಕಳವಕೊಂಡ, ನಗರಾಭಿವೃದ್ಧಿ ತಜ್ಞರಾದ ಪೂನಮ್ ಅಲುವಾಲಿಯಾ, ವಿಪತ್ತು ನಿರ್ವಹಣೆ ತಜ್ಞರಾದ ಅನೂಪ್ ಕಾರಂತ್ ಹಾಗೂ ಸಂಬಂಧಪಟ್ಟ ಬಿಬಿಎಂಪಿ-ಬಿಡಬ್ಲ್ಯೂಎಸ್ಎಸ್ಬಿ ಅಧಿಕಾರಿಗಳು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruflood mitigation projectKA Govtnatural disasterRs.1500 crore investmentstate governmentWorld Bank assisted₹3500 CR
0 FacebookTwitterPinterestEmail
KM Shivaraju

previous post
ನಿಗಮ- ಮಂಡಲಿ ನೇಮಕಾತಿ ಪೂರ್ಣ
next post
ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ