ಬೆಂಗಳೂರು:ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಯಲ್ಲೂ ಫ್ಯಾಕ್ಟ್ಚೆಕ್ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿಯಾಗುತ್ತವೆ, ಫೇಕ್ ನ್ಯೂಸ್ಗಳ ಪತ್ತೆ ಹಾಗೂ ನಿಯಂತ್ರಣಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಫ್ಯಾಕ್ಟ್ಚೆಕ್ ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ.
ಸಮಾಜ ಎಚ್ಚರದಿಂದ ಇರಬೇಕು
ಇಡೀ ಸಮಾಜ ಫೇಕ್ ನ್ಯೂಸ್ಗಳ ಬಗ್ಗೆ ಬಹಳ ಎಚ್ಚರದಿಂದ ಇರಬೇಕು, ಪತ್ರಿಕಾ, ಮಾಧ್ಯಮ ಸಂಘಟನೆಗಳು ಗಂಭೀರವಾಗಿ ಯೋಚಿಸಬೇಕು ಎಂದರು.
ಬೆಂಗಳೂರು ಪ್ರೆಸ್ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್, ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಪ್ರೆಸ್ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಉಪಸ್ಥಿತರಿದ್ದರು.