ಬೆಂಗಳೂರು:ಪ್ರಭಾವೀ ರಾಜಕಾರಣಿಗಳ ಕುಟುಂಬಗಳವರು ಕಣದಲ್ಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆದಿದ್ದು, ನಾಳೆ ಈ ಕ್ಷೇತ್ರಗಳ …
ಬೆಂಗಳೂರು:ಪ್ರಭಾವೀ ರಾಜಕಾರಣಿಗಳ ಕುಟುಂಬಗಳವರು ಕಣದಲ್ಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆದಿದ್ದು, ನಾಳೆ ಈ ಕ್ಷೇತ್ರಗಳ …
ಬೆಂಗಳೂರು:ಆರೋಗ್ಯ ಕ್ಷೇತ್ರದಲ್ಲಿ ಬಡಜನರಿಗೆ, ಆರ್ಥಿಕ ದುರ್ಬಲರಿಗೆ ಆದಿಚುಂಚನಗಿರಿ ಕ್ಷೇತ್ರ ಬಹುದೊಡ್ಡ ಪ್ರಮಾಣದಲ್ಲಿ ಸಹಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದಲ್ಲದೆ, ಶ್ರೀಕ್ಷೇತ್ರವು ಸಂಶೋಧನೆ …
ಉಡುಪಿ:ಯಾವುದೇ ಕಾರಣಕ್ಕೂ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ, ಅರ್ಹರ ಕಾರ್ಡ್ಗಳು ರದ್ದಾಗಿದ್ದರೆ ಈ ಬಗ್ಗೆ ಪಟ್ಟಿ ಕೊಡಲು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಂಚಿತರಿಗೆ ಮರು ಅರ್ಜಿಗೆ ಅವಕಾಶ …
ಸ್ಟೇಟಸ್ ರಿಪೋರ್ಟ್ ಲೋಕಾಯುಕ್ತ ಐಜಿಗೆ ಸಲ್ಲಿಕೆ ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ನಿವೇಶನಗಳ ಬಿಡಿ ಹಂಚಿಕೆಯಲ್ಲಿ ಅಧಿಕಾರಿಗಳು ಭಾರೀ ಲೋಪ ಎಸಗಿದ್ದಾರೆ ಎಂದು ಲೋಕಾಯುಕ್ತ ’ಸದ್ಯದಸ್ಥಿತಿ’ (ಸ್ಟೇಟಸ್ ರಿಪೋರ್ಟ್) …
ಬೆಂಗಳೂರು:ಕರ್ನಾಟಕ ರಾಜಕೀಯವನ್ನೇ ಅಸ್ತ್ರವಾಗಿಟ್ಟುಕೊಂಡು ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣಾ ಹೋರಾಟ ನಡೆಸಿವೆ. ಕರ್ನಾಟಕದ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರ ಮತ್ತು ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ …
ಹೆಚ್ಐವಿ ಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು ಟೆಕ್ ಮೇಳದಲ್ಲಿ ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ ಅಭಿಮತ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಂಒಯುಗೆ ಸಹಿ
ಮಹಿಳಾ ಸುರಕ್ಷತೆಗಾಗಿ ಬಿಎಂಟಿಸಿ ಬಸ್, ನಿಲ್ದಾಣದಲ್ಲಿ ಪ್ಯಾನಿಕ್ ಬಟನ್
ಆತಂಕಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್
ಯುಜಿ ಆಯುಷ್ ನೋಂದಣಿ, ಪ್ರವೇಶ
ನ.30ರಂದು ಕೊನೆ ಅವಕಾಶ: ಕೆಇಎ
ಬೆಂಗಳೂರು: ಬಾಕಿ ಉಳಿದಿರುವ ಯುಜಿ ಆಯುಷ್ ಸೀಟುಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೊನೆ ಅವಕಾಶ ನೀಡಿದ್ದು, ಅರ್ಹರು ನ.30ರಂದು ನಿಗದಿತ ಶುಲ್ಕದ ಡಿ.ಡಿ ಸಮೇತ ಕೆಇಎ ಕಚೇರಿಗೆ ಬಂದು ಪ್ರವೇಶ ಪಡೆಯಬಹದು.
ವಿಸ್ತರಿತ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ನಂತರ ಉಳಿದಿರುವ ಸೀಟುಗಳ ಸಂಖ್ಯೆಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅರ್ಹರಿಗೆ ಈ ಸೀಟುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯುಜಿನೀಟ್ ಅರ್ಹತೆಯ ಅಂಕಗಳನ್ನು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಹಾಗೂ ಇಲ್ಲಿಯವರೆಗೂ ನೋಂದಣಿ ಮಾಡದಿರುವ ಅರ್ಹ ಅಭ್ಯರ್ಥಿಗಳು ಸಹ ಸದರಿ ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ಇದ್ದಲ್ಲಿ ಅಂತಹವರು ಕೂಡ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೋಂದಣಿ ಮತ್ತು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೆಇಎ ಪೋರ್ಟಲ್ ನಲ್ಲಿ ನ.30ರ ಬೆಳಿಗ್ಗೆ 10ರಿಂದ 11ರವರೆಗೆ ಅವಕಾಶ ಇರುತ್ತದೆ.
ಹೊಸದಾಗಿ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಅಂದು ಬೆಳಿಗ್ಗೆ 11ರಿಂದ 11.30ರವೆಗೆ ನಡೆಯಲಿದೆ. ನಂತರ ಡಿ.ಡಿ ಸಲ್ಲಿಸಿದ ಅರ್ಹರಿಗೆ ಮಧ್ಯಾಹ್ನ 2 ಗಂಟೆವರೆಗೆ ಆಪ್ಷನ್ ಎಂಟ್ರಿಗೆ ಅವಕಾಶ ನೀಡಲಾಗುತ್ತದೆ. ಸಂಜೆ 4 ಗಂಟೆಗೆ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ರಮ್ಯಾ ತಿಳಿಸಿದ್ದಾರೆ.
ಪಿಜಿ ನೀಟ್ ಡಿಡಿ ಸಲ್ಲಿಸಲು ಮತ್ತೊಂದು ದಿನ ಅವಕಾಶ
ಪಿಜಿ ವೈದ್ಯಕೀಯ/ದಂತ ವೈದ್ಯಕೀಯ ಸೀಟುಗಳ ಭರ್ತಿಗೆ ನಡೆಸುವ ವಿಶೇಷ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ಅರ್ಹರಿಗೆ ಡಿ.ಡಿ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ನ.30ರ ಬೆಳಿಗ್ಗೆ 11ಗಂಟೆವರೆಗೆ ವಿಸ್ತರಿಸಲಾಗಿದೆ.
ಇದಾದ ನಂತರ ಮಧ್ಯಾಹ್ನ 12ರವರೆಗೆ ಆಪ್ಷನ್ ಎಂಟ್ರಿ ಮಾಡಬಹುದು. 3ಗಂಟೆಗೆ ಫಲಿತಾಂಶ ಪ್ರಕಟ. ನಂತರ ಮೂಲ ದಾಖಲೆ ಸಲ್ಲಿಸಲು 4 ಗಂಟೆವರೆಗೆ ಅವಕಾಶ ಇರುತ್ತದೆ ಎಂದು ರಮ್ಯಾ ತಿಳಿಸಿದ್ದಾರೆ.
ಉದ್ಯಮಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್
ರಾಜ್ಯದಲ್ಲಿ 10,755 ಮಂದಿಗೆ ಉದ್ಯೋಗಾವಕಾಶ